ಜಿಲ್ಲೆಯಾದ್ಯಂತ ವರುಣನ ಆರ್ಭಟಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಮುಂದುವರಿದೆ. ಶುಕ್ರವಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಗುರುವಾರ ಮಧ್ಯರಾತ್ರಿಯಿಂದಲೇ ವರುಣ ಆರ್ಭಟ ಜೋರಾಗಿತ್ತು. ಅಲ್ಲದೆ, ಶುಕ್ರವಾರ ಕೂಡ ಅಲ್ಲಲ್ಲಿ ಉತ್ತಮ ಮಳೆಯಾಗಿದೆ. ಸಂಜೆ 6 ಗಂಟೆ ಸುಮಾರಿಗೆ ಜಿಟಿ ಜಿಟಿಯಾಗಿ ಆರಂಭವಾದ ಮಳೆ ನಂತರ ಜೋರಾಗಿಯೇ ಸುರಿದಿದೆ.