ಸಂಸದೆ ಪ್ರಿಯಾಂಕಾಗೆ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತಕನ್ನಡಪ್ರಭ ವಾರ್ತೆ ಬೆಳಗಾವಿ ಚಿಕ್ಕೋಡಿ ಕ್ಷೇತ್ರದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಬೆಳಗಾವಿಯಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು. ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಅವರನ್ನು ನಗರದ ಕಾಂಗ್ರೆಸ್ ಭವನದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕಾರ್ಯಕರ್ತರು, ಅಭಿಮಾನಿಗಳು ಅವರ ಪರ ಘೋಷಣೆ ಕೂಗಿದರು. ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.