ಸಂಸ್ಕೃತಿಕ ಭವನದ ನಾಮಫಲಕ ಉದ್ಘಾಟನೆಕಳೆದ 10 ವರ್ಷದ ನಂತರ 2025ರಲ್ಲಿ ನಗರದ ಗ್ರಾಮ ದೇವತೆಯ ಜಾತ್ರಾ ಮಹೋತ್ಸವ ನಡೆಯಲಿದ್ದು, ಜಾತ್ರಾ ಕಮಿಟಿಯ ಅಧ್ಯಕ್ಷ ಹಾಗೂ ಶಾಸಕ ರಮೇಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ನಗರದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಹಾಗೂ ಸಾಂಸ್ಕೃತಿಕ ಭವನದ ನಿರ್ಮಾಣಕ್ಕೆ ಎಲ್ಲ ಸಹಾಯ ಸಹಕಾರ ನೀಡಲಾಗುವುದು ಎಂದು ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ ಹೇಳಿದರು.