ಆಧ್ಯಾತ್ಮಿಕತೆ ಚಿಂತನೆ ಮೈಗೂಡಿಸಿಕೊಳ್ಳುವುದು ಅಗತ್ಯಪುರಾಣ, ಪ್ರವಚನಗಳಿಂದ ಧರ್ಮ, ಸಂಸ್ಕ್ರತಿ, ಮಹಾತ್ಮರ ಮತ್ತು ಶರಣರ ತತ್ವ-ಸಿದ್ಧಾಂತಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಧ್ಯಾತ್ಮಿಕತೆ ಚಿಂತನೆ ಮೈಗೂಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಖಾಸ್ಗತೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾಶೀನಾಥ ಬಿರಾದಾರ ಹೇಳಿದರು.