ಕಲ್ಲೋಳಿ ಹನುಮ ದೇವಾಲಯದಲ್ಲಿ ಸಚಿವೆ ಹೆಬ್ಬಾಳಕರ ಪೂಜೆಹನುಮ ಜಯಂತಿ ಹಿನ್ನೆಲೆಯಲ್ಲಿ ಗೋಕಾಕ ತಾಲೂಕಿನ ಕಲ್ಲೋಳಿ ಹನುಮ ದೇವಾಲಯ ಹಾಗೂ ಶ್ರೀರಾಮ ಮಂದಿರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಸುಲಧಾಳ ಗ್ರಾಮದಲ್ಲಿರುವ ಹನುಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಾಡಿನ ಸಮಸ್ತ ಜನರಿಗೆ ಒಳಿತಾಗಲಿ, ಮಳೆ-ಬೆಳೆ ಚೆನ್ನಾಗಿ ಆಗಲಿ, ನಾಡಿನ ಜನರು ಸುಖ-ಶಾಂತಿ ಸಮೃದ್ಧಿಯಿಂದ ಬದುಕಲಿ ಎಂದು ಪ್ರಾರ್ಥಿಸಿದರು.