ವಿದ್ಯಾರ್ಥಿನಿ ಜತೆಗೆ ಹೋಗುತ್ತಿದ್ದ ವಿದ್ಯಾರ್ಥಿಗೆ ಹಲ್ಲೆ, ಬೆದರಿಕೆಅನ್ಯಕೋಮಿನ ಪರಿಚಿತ ಯುವತಿಯನ್ನು ದ್ವಿಚಕ್ರ ವಾಹನ ಮೇಲೆ ಕರೆದುಕೊಂಡು ಹೋಗುತ್ತಿದ್ದ ಹಿಂದು ಯುವಕನ ಮೇಲೆ ಅಪರಿಚಿತ ಯುವಕರ ಗುಂಪು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕುವ ಮೂಲಕ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಯುವಕನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಅಪ್ರಾಪ್ತರನ್ನು ವಶಕ್ಕೆ ಪಡೆದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.