ಪಾಲಿಕೆಗೆ ಲೋಕಾ ಅಧಿಕಾರಿಗಳು ದಿಢೀರ್ ದಾಳಿಕಡತ ವಿಲೇವಾರಿಯಲ್ಲಿ ವಿಳಂಬ, ನಿಗದಿತ ಶುಲ್ಕಕ್ಕಿಂತ ಹೆಚ್ಚಿಗೆ ಹಣ ವಸೂಲಿ, ಸಮಯಕ್ಕೆ ಸರಿಯಾಗಿ ಕಚೇರಿಗೆ ಆಗಮಿಸದ ಸಿಬ್ಬಂದಿ ಸೇರಿದಂತೆ ವಿವಿಧ ದೂರುಗಳ ಹಿನ್ನೆಲೆಯಲ್ಲಿ ಮಂಗಳವಾರ ಇಲ್ಲಿನ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಬಿಸಿ ಮುಟ್ಟಿಸಿದ್ದಾರೆ.