ತಾಯಿ ಋಣ ಜನ್ಮಭೂಮಿಯ ಋಣ ತೀರಿಸಲು ಸಾಧ್ಯವಿಲ್ಲಕನ್ನಡಪ್ರಭ ವಾರ್ತೆ ಬೆಳಗಾವಿ ತಾಯಿ ಋಣ ಜನ್ಮಭೂಮಿಯ ಋಣ ತೀರಿಸಲು ಸಾಧ್ಯವಿಲ್ಲ ಎಂದು ಹಿರಿಯ ಸಾಹಿತಿ ಆಶಾ ಕಡಪಟ್ಟಿ ಹೇಳಿದರು. ನಗರದ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲೆ ಲೇಖಕಿಯರ ಸಂಘದ ಉದ್ಘಾಟನೆ ಮತ್ತು ಅಧಿಕಾರ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಲೇಖಕಿಯರ ಸಂಘದ ಬೆಳ್ಳಿ ಹಬ್ಬದ ಹೊಸ್ತಿಲಲ್ಲಿ ಎಲ್ಲ ಸಾಹಿತ್ಯಿಕ ಮನಸುಗಳಿಗೆ ಬರಹ ನಿರಂತರವಾಗಿರಲಿ, ಪ್ರತಿಯೊಬ್ಬರಲ್ಲಿಯೂ ಒಂದೊಂದು ಪ್ರತಿಭೆ ಇರುತ್ತದೆ. ಅಂತಹ ಪ್ರತಿಭೆಯನ್ನು ಪೋಷಿಸಿ ನೀರೆರೆದು ಬೆಳೆಸುವ ಸಾಹಿತ್ಯ ಮನಸುಗಳು ಬೇಕು ಎಂದರು.