ಪಹಲ್ಗಾಮ್ ಉಗ್ರರ ದಾಳಿಗೆ ತೀವ್ರ ಆಕ್ರೋಶಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಬೆಳಗಾವಿಯಲ್ಲಿ ಬುಧವಾರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಅಲ್ಲದೆ, ಉಗ್ರರ ದಾಳಿಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಎಬಿವಿಪಿ, ಶ್ರೀರಾಮ ಸೇನೆ, ಶ್ರೀರಾಮಸೇನೆ ಹಿಂದೂಸ್ತಾನ ಸಂಘಟನೆ ಹಾಗೂ ಬೆಳಗಾವಿ ವಕೀಲರ ಸಂಘ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ, ಉಗ್ರರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿವೆ.