ಸಲಾಯನ್ ಹಚ್ಚಿಕೊಂಡೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ!ಎಸ್ಸೆಸ್ಸೆಲ್ಸಿ ವಿಜ್ಞಾನ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ಸಲಾಯನ್ ಹಚ್ಚಿಕೊಂಡೇ ಪರೀಕ್ಷೆ ಬರೆದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಲಾಬಾದ ವಿಮೋಚನಾ ವಸತಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಶನಿವಾರ ನಡೆದಿದೆ. ಬಳ್ಳಿಗೇರಿ ಸರ್ಕಾರಿ ಪ್ರೌಢಶಾಲೆಯ ಕವಿತಾ ಮಲ್ಲಪ್ಪ ಹಿಪ್ಪರಗಿ ವೈದ್ಯಕೀಯ ಚಿಕಿತ್ಸೆ ಪಡೆದು ಪರೀಕ್ಷೆ ಬರೆದ ವಿದ್ಯಾರ್ಥಿನಿ.