ಬರದ ಸಂಕಷ್ಟದಲ್ಲಿರುವ ಜನತೆಗೆ ನೀತಿ ಸಂಹಿತೆ ಬರೆ!ಅಥಣಿ ತಾಲೂಕಿನಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಥಣಿ ಪೂರ್ವ ಹಾಗೂ ಉತ್ತರ ಭಾಗದ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಇನ್ನೂ ಎರಡು ತಿಂಗಳು ಬೇಸಿಗೆ ಮುಂದುವರಿಯಲಿದ್ದು, ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಹೇಗೆ ಮಾಡೋದು ಎಂಬ ಚಿಂತೆ ಅನ್ನದಾತರು, ಸಾರ್ವಜನಿಕರನ್ನು ಕಾಡುತ್ತಿದ್ದರೆ, ಟ್ಯಾಂಕರ್ ಮೂಲಕ ನೀರು ಪೂರೈಸಲು ಸಮಾಜಸೇವಕರು, ಜನಪ್ರತಿನಿಧಿಗಳು ಮುಂದಾಗಿದ್ದರೂ ನೀತಿ ಸಂಹಿತೆ ಅಡ್ಡಿಯಾಗಿದೆ.