ಧರ್ಮ, ದೇವರು ಹೆಸರಿನಲ್ಲಿ ದಾರಿ ತಪ್ಪಿಸುತ್ತಿರುವ ಬಿಜೆಪಿ: ಮೃಣಾಲ್ ಹೆಬ್ಬಾಳಕರ್ಯರಗಟ್ಟಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬೆಳಗಾವಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್, ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಈಗಾಗಲೇ ಯಶಸ್ವಿಯಾಗಿದೆ. ಎಲ್ಲೂ ಲಂಚದ ಹಾವಳಿ ಇಲ್ಲದೆ ಗೃಹ ಲಕ್ಷ್ಮೀ ಯೋಜನೆ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಕಾಂಗ್ರೆಸ್ ಸಂವಿಧಾನ ಬದ್ಧವಾಗಿ ಚುನಾವಣೆ ಎದುರಿಸಿದರೆ, ಬಿಜೆಪಿ ಧರ್ಮ, ದೇವರು ಎಂದು ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.