ಸಮಸ್ಯೆಗೆ ಸ್ಪಂದಿಸದವರ ವಿರುದ್ಧ ಕ್ರಮಬೆಳಗಾವಿ: ನಗರದ ಪೊಲೀಸ್ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ, ಜೂಜಾಟ, ಮಟ್ಕಾ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ಯಾವುದೇ ಮುಲಾಜಿಲ್ಲದೇ ಮಟ್ಟಹಾಕಲು ಹಾಗೂ ಸಾರ್ವಜನಿಕರ ಸಮಸ್ಯೆಗೆ ಪೊಲೀಸರು ತ್ವರಿತವಾಗಿ ಸ್ವಂದಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಇಲ್ಲವಾದಲ್ಲಿ ನಿರ್ಲಕ್ಷ್ಯವಹಿಸುವ ಅಧಿಕಾರಿ, ಸಿಬ್ಬಂದಿ ವಿರುದ್ದ ಕ್ರಮಕೈಗೊಳ್ಳುತ್ತೇನೆ ಎಂದು ನಗರ ಪೊಲೀಸ್‌ನ ನೂತನ ಆಯುಕ್ತ ಇಡಾ ಮಾರ್ಟಿನ ಖಡಕ್ ಎಚ್ಚರಿಕೆ ನೀಡಿದರು.