ಮಹಿಳಾ ದೌರ್ಜನ್ಯ ತಡೆಗೆ ವ್ಯಾಪಕ ಪ್ರಚಾರ ಕೈಗೊಳ್ಳಿಬೆಳಗಾವಿ: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಪ್ರದೇಶ, ಶಾಲಾ, ಕಾಲೇಜುಗಳಲ್ಲಿ ಸಹಾಯವಾಣಿ ಸಂಖ್ಯೆ ಪೋಸ್ಟರ್, ಜಾಗೃತಿ ಕಾರ್ಯಕ್ರಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.