ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು?ಬೆಳಗಾವಿ: ಎನ್‌ಡಿಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಮೋದಿಯವರು. ಆದರೆ, ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಅವರು ಹೇಳಬೇಕು. ಪ್ರಧಾನಿ ಯಾರು ಆಗುತ್ತಾರೆ ಎಂಬುವುದರ ಕುರಿತು ಅವರಲ್ಲೇ ಗೊಂದಲವಿದೆ ಎಂದು ರಾಜ್ಯ ಬಿಜೆಪಿ ವಕ್ತಾರೆ ಮಾಳ್ವಿಕಾ ಅವಿನಾಶ ವ್ಯಂಗ್ಯವಾಡಿದರು.ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.26 ರಂದು ದಕ್ಷಿಣ ಕರ್ನಾಟದ 14 ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅಲ್ಲಿನ ಜನ ಉತ್ತಮ ಬೆಂಬಲ ನೀಡುತ್ತಿದ್ದಾರೆ