ಪ್ರಧಾನಿ ಕಾರ್ಯಕ್ರಮ ಸ್ಥಳ ಪರಿಶೀಲಿಸಿದ ಜಾರಕಿಹೊಳಿ ಸಹೋದರರುಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಏ.28 ರಂದು ಆಗಮಿಸಲಿದ್ದು, ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.