ಬತ್ತುತ್ತಿದೆ ಕೃಷ್ಣಾ, ಹೆಚ್ಚುತ್ತಿಗೆ ನೀರಿನಾತಂಕ!ಚಳಿಗಾಲ ಮುಗಿದು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ತೆರೆದ ಬಾವಿ, ಕೊಳವೆ ಬಾವಿ, ಹಳ್ಳ, ಕೊಳ್ಳ, ಕೆರೆಗಳು ಸೇರಿದಂತೆ ಈ ಭಾಗದ ಜನತೆಯ ಜೀವನಾಡಿ ಕೃಷ್ಣಾ ನದಿಯ ಒಡಲು ಕೂಡ ದಿನದಿಂದ ದಿನಕ್ಕೆ ಬರಿದಾಗುತ್ತಿದ್ದು, ಈಗ ಸದ್ಯ 3.82 ಟಿಎಂಸಿ ನೀರಿನ ಸಂಗ್ರಹವಿದ್ದು, ದಿನದಿಂದ ದಿನಕ್ಕೆ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಮುಂಬರುವ ಬೇಸಿಗೆ ದಿನಗಳಲ್ಲಿ ತಾಲೂಕಿನ ಸುಮಾರು 80 ಹಳ್ಳಿಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ ಗ್ಯಾರಂಟಿ ಎನ್ನುವಂತಾಗಿದೆ.