ಶಾಲೆಗಳತ್ತ ಹೆಜ್ಜೆ ಹಾಕಿದ ಚಿಣ್ಣರುಕನ್ನಡಪ್ರಭ ವಾರ್ತೆ ಬೆಳಗಾವಿ ಬೇಸಿಗೆ ರಜೆಯಲ್ಲಿ ಖುಷಿಯಿಂದ ಊರು, ಕೇರಿ ಎಂದು ಓಡಾಡಿಕೊಂಡಿದ್ದ ಮಕ್ಕಳು ಶುಕ್ರವಾರ ಶಾಲೆಯತ್ತ ಹೆಜ್ಜೆ ಹಾಕಿ ತಮ್ಮ ಸಹಪಾಠಿಗಳೊಂದಿಗೆ ಸಂಭ್ರಮಿಸಿದರು. ಜಿಲ್ಲಾದ್ಯಂತ ಶಾಲೆಗಳು ಆರಂಭವಾಗಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು 2 ತಿಂಗಳು ಬೇಸಿಗೆ ರಜೆಯಲ್ಲಿ ಮಜಾ ಮಾಡಿದ ಮಕ್ಕಳು ಶಾಲೆಗೆ ಆಗಮಿಸಿ ಸಹಪಾಠಿಗಳೊಂದಿಗೆ ಅನುಭವ ಹಂಚಿಕೊಂಡರು.