ಮತಗಟ್ಟೆ ಪರಿಶೀಲಿಸಿದ ಚಿಕ್ಕೋಡಿ ಕ್ಷೇತ್ರದ ಚುನಾವಣಾಧಿಕಾರಿಕನ್ನಡಪ್ರಭ ವಾರ್ತೆ ಹುಕ್ಕೇರಿ: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಮೇ7ರಂದು ಮತದಾನ ಜರುಗಲಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ವಿಧಾನಸಭೆ ಮತಕ್ಷೇತ್ರದ ವ್ಯಾಪ್ತಿಯ ಸೂಕ್ಷ್ಮ, ಅತೀ ಸೂಕ್ಷ್ಮ, ಸಖಿ ಹಾಗೂ ಮಾದರಿ ಮತಗಟ್ಟೆಗಳಿಗೆ ಬುಧವಾರ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಜಿಪಂ ಸಿಇಒ ರಾಹುಲ್ ಶಿಂಧೆ ಭೇಟಿ ನೀಡಿ ಪರಿಶೀಲಿಸಿದರು.