ಪ್ರೀತಿಸದ ಯುವತಿ ಮನೆಮೇಲೆ ಕಲ್ಲು ತೂರಾಟ!ಕನ್ನಡಪ್ರಭ ವಾರ್ತೆ ಬೆಳಗಾವಿ ಪ್ರೀತಿಸಿ, ಮದುವೆಯಾಗುವಂತೆ ಬೆನ್ನುಬಿದ್ದ ಪ್ರೇಮಿ ಹುಬ್ಬಳಿಯ ನೇಹಾ ಹಿರೇಮಠ ರೀತಿಯಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಯುವತಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮದಲ್ಲಿ ಶನಿವಾರ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ತಾಲೂಕಿನ ಕಿಣಯೆ ಗ್ರಾಮದ ತಿಪ್ಪಣ್ಣ ಡೋಕರೆ (27)ಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಬಂಧಿತ ಪೀಡಿಸಿದ್ದಾನೆ.