ಮುಗಳಖೋಡ ಮಠಕ್ಕೆ ಶೆಟ್ಟರ, ಜೊಲ್ಲೆ ದಂಪತಿ ಭೇಟಿಮುಗಳಖೋಡ: ಪಟ್ಟಣದ ಸದ್ಗುರು ಯಲ್ಲಾಲಿಂಗ ಪ್ರಭು ಮಹಾರಾಜರ ಶ್ರೀಮಠಕ್ಕೆ ಚಿಕ್ಕೋಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ ಹಾಗೂ ಅವರ ಪುತ್ರಿ ಶ್ರೀಮಠಕ್ಕೆ ಭೇಟಿ ನೀಡಿ ಯಲ್ಲಾಲಿಂಗ ಪ್ರಭುವಿನ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.