ಕನ್ನಡ ನಾಮಫಲಕ: ಗೋಕಾಕದಲ್ಲಿ ಕರವೇ ಜಾಗೃತಿ ಜಾಥಾಗೋಕಾಕ: ರಾಜ್ಯ ಸರ್ಕಾರದ ಆದೇಶದನ್ವಯ ನಗರದ ಅಂಗಡಿ, ಮುಂಗಟ್ಟುಗಳ ಮೇಲೆ ಅಳವಡಿಸಿರುವ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕ ಮಂಗಳವಾರ ನಗರದಲ್ಲಿ ಜಾಗೃತಿ ಜಾಥಾ ಹಮ್ಮಿಕೊಂಡು ಅಂಗಡಿ, ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಅಳವಡಿಸಿದ ಅಂಗಡಿ ಮಾಲೀಕರಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.