ಮದ್ಯದಂಗಡಿ ಸ್ಥಳಾಂತರಕ್ಕೆ ಅಹೋರಾತ್ರಿ ಧರಣಿಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಹತ್ತಿರದ ಸಂಕೋನಟ್ಟಿ ವಲಯದ ಜನವಸತಿ ಪ್ರದೇಶದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯದಂಗಡಿಗೆ ಅನುಮತಿ ನೀಡಿದ್ದು, ಬಾಡಿಗೆ ಮನೆಯಲ್ಲಿ ನಡೆಸುತ್ತಿರುವ ಈ ಮದ್ಯದ ಅಂಗಡಿಯನ್ನು ಕೂಡಲೇ ತೆರವುಗೊಳಿಸಬೇಕು. ಮದ್ಯದಂಗಡಿ ಬೇರೆ ಕಡೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿ ಸಂಕೋನಟ್ಟಿ ಗ್ರಾಮಸ್ಥರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.