ಕೊಲ್ಲಾಪುರ ಅಂಗಡಿಗಳ ಕನ್ನಡ ಫಲಕಕ್ಕೆ ಶಿವಸೇನೆಯಿಂದ ಬೆಂಕಿ!ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ ಅಂಗಡಿ, ಮುಂಗಟ್ಟುಗಳು, ವಾಣಿಜ್ಯ ಸಂಕೀರ್ಣಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಫಲಕಗಳನ್ನು ಕಿತ್ತು ಹಾಕಿ, ಬೆಂಕಿ ಹಚ್ಚಿ ಉದ್ಧಟತನ ಪ್ರದರ್ಶಿಸಿದ್ದಾರೆ.