7 ತಿಂಗಳ ಗರ್ಭೀಣಿಗೆ ಟ್ರಿಪಲ್ ಬೈಪಾಸ್ ಹೃದಯ ಶಸ್ತ್ರ ಚಿಕಿತ್ಸೆಬೆಳಗಾವಿಯ ಅರಿಹಂತ ಆಸ್ಪತ್ರೆಯಲ್ಲಿ 7 ತಿಂಗಳ ಗರ್ಭಿಣಿಯೊಬ್ಬರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದ್ದು, ಇದು ವಿಶ್ವದಲ್ಲೇ ಪ್ರಥಮ ಎನ್ನಲಾಗಿದೆ. ಹೃದ್ರೋಗದಿಂದ ಬಳಲುತ್ತಿದ್ದ ಗರ್ಭಿಣಿಗೆ ಹೃದಯ ಚಿಕಿತ್ಸಾ ಪ್ರಕ್ರಿಯೆ ಕ್ಲಿಷ್ಟಕರವಾಗಿತ್ತು. ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಎಂ.ಡಿ.ದೀಕ್ಷಿತ ಅವರ ತಂಡವು ಶಸ್ತ್ರಚಿಕಿತ್ಸೆ ನೆರವೇರಿಸುವಲ್ಲಿ ಯಶಸ್ವಿಯಾಗಿದೆ.