ಜಾತಿ, ಆದಾಯ ಪ್ರಮಾಣ ಪತ್ರ ವಿಳಂಬ ಖಂಡಿಸಿ ಮನವಿಚಿಕ್ಕೋಡಿ ತಾಲೂಕಿನಲ್ಲಿ ವಾಸಿಸುವ ದೇವಾಂಗ ಸಮಾಜದ ಜನರಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಇನ್ನುಳಿದ ಪ್ರಮಾಣ ಪತ್ರಗಳನ್ನು ಪೂರೈಸುವಲ್ಲಿ ತೊಂದರೆಯಾಗುತ್ತಿದ್ದು, ವಿನಾಕಾರಣ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ದೇವಾಂಗ ಸಮಾಜದ ಅಧ್ಯಕ್ಷ ಮಹಾದೇವ ವರೂಟೆ ನೇತೃತ್ವದಲ್ಲಿ ತಹಸೀಲ್ದಾರ್ ಸಿ.ಎಸ್.ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.