ಬಿಜೆಪಿ ಜಿಲ್ಲಾಧ್ಯಕ್ಷರ ಹುದ್ದೆಗೆ ಭಾರೀ ಪೈಪೋಟಿಗಡಿ ಜಿಲ್ಲೆ ಬೆಳಗಾವಿಯಲ್ಲಿ ಬಿಜೆಪಿ ಮೂರು ಘಟಕಗಳ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹಿಂದೆಂದೂ ಇರದ ತೀವ್ರ ಪೈಪೋಟಿ ಏರ್ಪಟ್ಟಿದೆ. ಬೆಳಗಾವಿ ಮಹಾನಗರ ಜಿಲ್ಲೆ, ಬೆಳಗಾವಿ ಗ್ರಾಮೀಣ ಜಿಲ್ಲೆ ಹಾಗೂ ಚಿಕ್ಕೋಡಿ ಜಿಲ್ಲಾ ಘಟಕಗಳ ಪದಾಧಿಕಾರಿಗಳ ನೂತನ ಆಯ್ಕೆಯಾಗಬೇಕಿದೆ.ಪಕ್ಷದಲ್ಲಿ ಸಲ್ಲಿಸಿದ ಸೇವೆ, ಸಂಘಟನೆ ಹಿರಿತನದ ಆಧಾರದ ಮೇಲೆ ಒಬ್ಬರನ್ನು ಆಯ್ಕೆ ಮಾಡುತ್ತಿದ್ದ ಬಿಜೆಪಿಯಲ್ಲಿ ಈಗ ಅಧ್ಯಕ್ಷ ಪದವಿಗೇರಲು ನಾ ಮುಂದೆ, ತಾ ಮುಂದೆ ಎಂದು ಹಲವು ನಾಯಕರು ತೀವ್ರ ಪೈಪೋಟಿಗಳಿದಿದ್ದಾರೆ. ಇದಕ್ಕೆ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರ ಬೇಕಿದೆ.