ರಾಯಣ್ಣ ಫಲಕ ಅಳವಡಿಸಿದ್ದಕ್ಕೆ ಕನ್ನಡಿಗರ ಮೇಲೆ ಹಲ್ಲೆಅಂಕಲಿ ಗ್ರಾಮದಲ್ಲಿ ಕಳೆದ ಹದಿನೈದು ದಿನಗಳ ಹಿಂದೆ ಗ್ರಾಮ ಪಂಚಾಯತಿ ಜಾಗದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ ನಿರ್ಮಾಣದ ಕುರಿತು ನಾಮಫಲಕ ಅಳವಡಿಸಲಾಗಿತ್ತು. ಕರ್ನಾಟಕ ರಾಜ್ಯೋತ್ಸವ ಆಚರಣೆ ಸಮಿತಿ ವತಿಯಿಂದ ರಾಯಣ್ಣ ವೃತ್ತ ನಿರ್ಮಾಣ ಮಾಡಲು ಪರವಾನಗಿ ನೀಡುವಂತೆ ಪುರಸಭೆಗೆ ಮನವಿ ಕೂಡ ಸಲ್ಲಿಸಲಾಗಿತ್ತು. ಆದರೆ, ಈ ಮನವಿಗೆ ಗ್ರಾಮ ಪಂಚಾಯತಿಯಲ್ಲಿ ವಿರೋಧ ವ್ಯಕ್ತವಾಗಿದ್ದು, ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.