ಆಂಗ್ಲ ನಾಮಫಲಕಗಳಿಗೆ ಮಸಿ ಬಳೆದು ಆಕ್ರೋಶಬೈಲಹೊಂಗಲದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಂಗಡಿ-ಮುಂಗಟ್ಟುಗಳ ಆಂಗ್ಲ ಭಾಷೆಯ ನಾಮಫಲಕಗಳಿಗೆ ಮಂಗಳವಾರ ಮಸಿ ಬಳೆದು, ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಆಂಗ್ಲ ಭಾಷೆಯ ನಾಮಫಲಕಗಳಿಗೆ ಮಸಿ ಬಳೆದು ಹರಿದು ಹಾಕುತ್ತಿದ್ದಂತೆ ಅಂಗಡಿಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಯುನಿಯನ್ ಬ್ಯಾಂಕ್ ಮ್ಯಾನೇಜರ್ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಮತ್ತಷ್ಟು ಆಕ್ರೋಶಗೊಂಡ ಪ್ರತಿಭಟನಾಕಾರರು ಬ್ಯಾಂಕುಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ಮಾತನಾಡಬೇಕು. ಇಲ್ಲದಿದ್ದರೇ ರಾಜೀನಾಮೆ ನೀಡಿ ಹೋಗಬೇಕೆಂದು ಆಗ್ರಹಿಸಿ ನಾಮಫಲಕಗಳನ್ನು ಹರಿದು ಹಾಕಲಾಯಿತು.