ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆದೇಶದಲ್ಲಿಯೇ ಕರ್ನಾಟಕ ರಾಜ್ಯದಲ್ಲಿನ ಪದವಿ ಪೂರ್ವ ಶಿಕ್ಷಣ ಉತ್ತಮ ಸಾಧನೆ ಮಾಡಿದೆ. ಆದರೆ ಇತ್ತೀಚೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಹೆಸರನ್ನು ಬದಲಾವಣೆ ಮಾಡುವುದು ಹಾಗೂ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ನಡೆಸಲು ಏಕಾಎಕಿ ನಿರ್ಧಾರ ಕೈಗೊಳ್ಳುವ ಮೂಲಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಶವಪಟ್ಟಿಗೆಗೆ ಮೊಳೆ ಹೊಡೆಯುವ ಕಾರ್ಯ ಮಾಡಲು ಹೊರಟಿರುವುದು ಸರಿಯಲ್ಲ.