ಕಾಯಂ ಪೀಠ ಈ ಭಾಗದ ಜನರಿಗೆ ಅನುಕೂಲಅಧಿಕ ಬೆಲೆ ನಿಗದಿ, ಸೇವೆಗಳಲ್ಲಿನ ಕೊರತೆ, ಉತ್ಪನ್ನಗಳ ಗುಣಮಟ್ಟ, ದಾರಿ ತಪ್ಪಿಸುವ ಜಾಹೀರಾತುಗಳು ಅಥವಾ ಮಾರಾಟಗಾರ ವ್ಯಾಪಾರಿಯ ಅನ್ಯಾಯದ ಕುರಿತು ಗ್ರಾಹಕರ ದೂರುಗಳನ್ನು ಪರಿಹರಿಸಲು ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾಯಂ ಸಂಚಾರಿ ಪೀಠ ಪ್ರಾರಂಭವಾಗಿರುವುದು ಈ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.