ಅತಿವೃಷ್ಟಿಗೆ 56 ಸಾವಿರ ಹೆಕ್ಟೇರ್ ಬೆಳೆ ಹಾನಿಅತಿವೃಷ್ಟಿಯಿಂದಾಗಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆದಿದ್ದ ಸುಮಾರು 56000 ಹೆಕ್ಟೇರ್ ಪ್ರದೇಶದಲ್ಲಿದ್ದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ರೈತ ಬೆಳೆದ ಕೋಟ್ಯಂತರ ರುಪಾಯಿ ಮೌಲ್ಯದ ಬೆಳೆಗಳು ನೀರು ಪಾಲಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ.