ಕೃಷಿಕ ಸಮಾಜದ ಅಧ್ಯಕ್ಷರಾಗಿ ಕೋಮಲ, ಉಪಾಧ್ಯಕ್ಷರಾಗಿ ರಮೇಶ ಆಯ್ಕೆಸ್ಥಳೀಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ಜರುಗಿದ ತಾಲೂಕು ಕೃಷಿಕ ಸಮಾಜದ ಪದಾಧಿಕಾರಿಗಳ ಚುನಾವಣೆಯಲ್ಲಿ ಕೃಷಿಕ ಸಮಾಜದ ಅಧ್ಯಕ್ಷರಾಗಿ ಕೋಮಲ ಜಿನಗೊಂಡ, ಉಪಾಧ್ಯಕ್ಷರಾಗಿ ರಮೇಶ ಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಹೊಸೂರ, ಖಜಾಂಚಿಯಾಗಿ ಈರಣ್ಣ ಹಟ್ಟಿಹೊಳಿ, ಜಿಲ್ಲಾ ಪ್ರತಿನಿಧಿಯಾಗಿ ಕೃಷ್ಣಾಜಿ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.