ಸೇವೆ ಕಾಯಂಗೊಳಿಸಲು ಗುತ್ತಿಗೆ ನೌಕರರ ಆಗ್ರಹಗುತ್ತಿಗೆ ಸೇವೆಯನ್ನು ಕಾಯಂಗೊಳಿಸುವುದು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ ಏ.11 ರಿಂದ ಪೌರಕಾರ್ಮಿಕರು ಮತ್ತು ನೌಕರರು ನಡೆಸುತ್ತಿರುವ ಅನಿರ್ದಿಷ್ಟ ಕಾಲದ ಮುಷ್ಕರ 15ನೇ ದಿನಕ್ಕೆ ಕಾಲಿಟ್ಟಿದ್ದು, ಅಥಣಿ ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು ನೌಕರರು ಶುಕ್ರವಾರ ಶಾಸಕ ಲಕ್ಷ್ಮಣ ಸವದಿ ಅವರಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ತಮ್ಮ ವಿವಿಧ ಬೇಡಿಕೆಗಳಿಗೆ ಹಕ್ಕೋತ್ತಾಯ ಮಾಡಿದರು.