ಅಮೃತ ಯೋಜನೆ ಕಾಮಗಾರಿ ಮುಂದಿನ ವರ್ಷದೊಳಗೆ ಪೂರ್ಣಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ವರ್ಷದೊಳಗೆ ಕಾಮಗಾರಿ ಮುಗಿಯಲಿದೆ. ಪ್ರತಿಯೊಂದೂ ಕುಟುಂಬಗಳಿಗೆ ಕುಡಿಯುವ ನೀರು ಮನೆ ಮನೆಗಳಿಗೆ ತಲುಪಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.