ಅಥಣಿಯಲ್ಲಿ ಗಾಂಧಿ ಗ್ರಾಮೀಣ ಗುರುಕುಲ ಶೀಘ್ರ ಆರಂಭ: ಸುಧೀಂದ್ರ ಕುಲಕರ್ಣಿಪಕ್ಷ, ಜಾತಿ ಭೇದವಿಲ್ಲದೆ ಸಾರ್ವಜನಿಕರು ಮತ್ತು ಶಾಲಾ ಕಾಲೇಜಿನ ಮಕ್ಕಳಲ್ಲಿ ವೈಚಾರಿಕ ಪ್ರಜ್ಞೆ ಮತ್ತು ಸುಧಾರಿತ ಕೃಷಿ ಪದ್ಧತಿ, ಸಂಸ್ಕಾರ ಶಿಬಿರಗಳು ಸೇರಿದಂತೆ ಪ್ರತಿಯೊಬ್ಬರ ಬದುಕಿಗೆ, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಿಂತನ-ಮಂಥನ ಕಾರ್ಯಕ್ರಮ ನಡೆಸುವ ಸದುದ್ದೇಶದಿಂದ ಮಹಾತ್ಮ ಗಾಂಧೀಜಿ ಗ್ರಾಮೀಣ ಗುರುಕುಲವನ್ನು ಅಥಣಿ ಪಟ್ಟಣದ ಹೊರವಲಯದಲ್ಲಿ ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಪ್ರಸಿದ್ಧ ಅಂಕಣಕಾರ, ಸಾಮಾಜಿಕ ಚಿಂತಕ ಸುಧೀಂದ್ರ ಕುಲಕರ್ಣಿ ಹೇಳಿದರು.