ಲಾಠಿಚಾರ್ಜ್ ಖಂಡಿಸಿ ಕಾಗವಾಡದಲ್ಲಿ ರಸ್ತೆ ತಡೆದು ಪ್ರತಿಭಟನೆಪಂಚಮಸಾಲಿ ಸಮುದಾಯದ ಶಾಂತಿಯುತ ಹೋರಾಟವನ್ನು ಹತ್ತಿಕ್ಕಲು ಮಂಗಳವಾರ ಬೆಳಗಾವಿಯಲ್ಲಿ ಪ್ರತಿಭಟನೆ ನಿರತರ ಮೇಲೆ ಲಾಠಿಚಾರ್ಜ್ ಮಾಡಿ, ಹೋರಾಟದ ಧಿಕ್ಕು ತಪ್ಪಿಸುವ ಪ್ರಯತ್ನ ಸರ್ಕಾರ ಮಾಡುತ್ತಿದ್ದು, ಸರ್ಕಾರದ ನಡೆ ಖಂಡನೀಯವಾಗಿದೆ. ಲಾಠಿಚಾರ್ಜ್ ಮಾಡಲು ಆದೇಶ ನೀಡಿರುವ ಎಡಿಜಿಪಿ ಆರ್.ಹಿತೇಂದ್ರ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿ, ತಾಲೂಕಿನ ಪಂಚಮಸಾಲಿ ಸಮುದಾಯದ ಮುಖಂಡರು ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿ, ಆಗ್ರಹಿಸಿದರು.