ಟ್ರ್ಯಾಕ್ಟರ್ ರ್‍ಯಾಲಿ ಇಲ್ಲ, ಬರೀ ಪಂಚಮಸಾಲಿ ಹೋರಾಟ2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮಾಜದ ಹೋರಾಟಕ್ಕೆ ಟ್ರ್ಯಾಕ್ಟರ್, ಕ್ರ್ಯೂಸರ್ ನಗರಕ್ಕೆ ಬರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ನಿರಾಸೆ ಉಂಟು ಮಾಡಿತ್ತು. ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ನಾವು ಯೋಜನೆ ರೂಪಿಸಿದ್ದೇವೆ. ನಮ್ಮ ಹೋರಾಟಕ್ಕೆ ಮಣಿದು ಜಿಲ್ಲಾಧಿಕಾರಿ, ಪೊಲೀಸ್ ಕಮೀಷನರ್, ಎಸ್ಪಿ ಮೂವರು ಬಂದು ನಮ್ಮ ಜೊತೆ ಚರ್ಚೆ ಮಾಡಿ, ನಮ್ಮ ಹೋರಾಟಕ್ಕೆ ಅನುಮತಿ ನೀಡಿದ್ದಾರೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.