ರಾಜ್ಯದಲ್ಲಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿರುವ ವಕ್ಫ್ ಆಸ್ತಿ ವಿವಾದ ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ವಿಧಾನ ಪರಿಷತ್‌ನಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷದವರ ನಡುವೆ ತೀವ್ರ ವಾಗ್ವಾದ, ರಾಜೀನಾಮೆ ಸವಾಲು-ಪ್ರತಿಸವಾಲಿಗೆ ಕಾರಣವಾಗಿ ಕಲಾಪವನ್ನೇ ಬಲಿ ಪಡೆಯಿತು.
ಬಿಪಿಎಲ್ ಪಡಿತರ ಕಾರ್ಡ್ ಪಡೆದಿರುವ ಅನರ್ಹರನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಶೀಲನೆ ಮೂಲಕ ಗುರುತಿಸಿ, ಅವರಿಗೆ ಬಿಪಿಎಲ್ ಕಾರ್ಡ್ ರದ್ದುಪಡಿಸಿ ಎಪಿಎಲ್ ಕಾರ್ಡ್ ನೀಡಲಾಗುವುದು - ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನದ ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಲಿದೆ. ಅಧಿವೇಶನದ ಮೊದಲ ದಿನವೇ ರೈತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಸಂಘಟನೆಗಳು ಸದನದ ಹೊರಗೆ ಸರ್ಕಾರದ ವಿರುದ್ಧ ಹೋರಾಟಕ್ಕೆ ಅಣಿಯಾಗಿವೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಹಿಂದೆಯೇ ಬೆಳಗಾವಿಯ ಬಿಮ್ಸ್ ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ 6 ತಿಂಗಳ ಅವಧಿಯಲ್ಲಿ 29 ಬಾಣಂತಿಯರು ಹಾಗೂ ಒಂದು ವರ್ಷದ ಅವಧಿಯಲ್ಲಿ 322 ನವಜಾತ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಮಾಹಿತಿ