ಮಕ್ಕಳನ್ನು ಕನ್ನಡ ಮಾಧ್ಯಮದಲ್ಲೇ ಓದಿಸಿಅನ್ಯಭಾಷೆ ಕಲಿಯುವುದು ತಪ್ಪಲ್ಲ, ಆದರೆ, ವಿಶ್ವದಲ್ಲಿಯೇ ಶ್ರೀಮಂತ ಸಂಸ್ಕೃತಿ ಹೊಂದಿರುವ ಕನ್ನಡ ಭಾಷೆಯ ಬಳಕೆ ಕಡಿಮೆ ಆಗಬಾರದು. ಕನ್ನಡ ಉಳಿಸಿ ಬೆಳೆಸಿ ಎಂದು ಹೇಳುವ ಬದಲು ಪ್ರತಿನಿತ್ಯ ವ್ಯವಹಾರದಲ್ಲಿ ಬಳಸಿದಾಗ ಮಾತ್ರ ಕನ್ನಡ ಉಳಿಸಲು ಸಾಧ್ಯ. ಮಾತೃಭಾಷೆ ಉಸಿರಾಗಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಚ್. ಶಿವರಾಮೇಗೌಡ ಹೇಳಿದರು.