ಸಿಎಂ ಸ್ಥಾನ ವಿಚಾರ ಹಾದಿ, ಬೀದಿಯಲ್ಲಿ ಮಾತಾಡೋ ವಿಷಯವಲ್ಲ: ಲಕ್ಷ್ಮೀ ಹೆಬ್ಬಾಳಕರ

| Published : Sep 12 2024, 01:47 AM IST

ಸಾರಾಂಶ

ಬೆಳಗಾವಿ: ಮುಖ್ಯಮಂತ್ರಿ ಸ್ಥಾನದ ವಿಚಾರ ಹಾದಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಬೆಳಗಾವಿ: ಮುಖ್ಯಮಂತ್ರಿ ಸ್ಥಾನದ ವಿಚಾರ ಹಾದಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಗಟ್ಟಿಯಾಗಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಎನ್ನುವುದು ಇದೆ. ಶಿಸ್ತು ಎನ್ನುವುದೂ ಇದೆ. ನಾನು ಕೂಡ ಪಕ್ಷದ ಶಿಸ್ತಿನ ಸಿಪಾಯಿ. ಇಂತಹ ವಿಚಾರಗಳನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ನಮ್ಮ ಪಕ್ಷದ 135 ಶಾಸಕರು ತೀರ್ಮಾನಿಸುತ್ತಾರೆ ಎಂದು ಸಚಿವರು ಹೇಳಿದರು.ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವವರೆಗೆ, ಆಯ್ಕೆಯಾದ ಶಾಸಕರು ತೀರ್ಮಾನ ತೆಗೆದುಕೊಳ್ಳುವವರೆಗೆ ಸಿಎಂ ಸ್ಥಾನದ ಬದಲಾವಣೆಯ ಪ್ರಶ್ನೆ ಬರುವುದಿಲ್ಲ. ಇಂತಹ ವಿಚಾರಗಳನ್ನು ಬೀದಿಯಲ್ಲಿ, ಗಲ್ಲಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದರು.

ಮುಂದಿನ ಸಿಎಂ ಲಕ್ಷ್ಮೀ ಹೆಬ್ಬಾಳಕರ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಪ್ರಶ್ನಿಸಿದಾಗ, ಅದಕ್ಕೆಲ್ಲಾ ಯಾವುದೇ ಬೆಲೆಯಿಲ್ಲ ಎಂದು ಪ್ರತಿಕ್ರಿಯಿಸಿದರು.