ಫಿಟ್ ಇಂಡಿಯಾ ಸೈಕ್ಲಿಂಗ್ ಚಾಂಪಿಯನ್ಶಿಪ್ಗೆಬೆಳಗಾವಿ ಅಜ್ಜಿ ಬ್ರಾಂಡ್ ಅಂಬಾಸಿಡರ್
Author : KannadaprabhaNewsNetwork
Published : Mar 07 2026, 01:15 AM IST
ಫಿಟ್ ಇಂಡಿಯಾ ಸೈಕ್ಲಿಂಗ್ ಚಾಂಪಿಯನ್ ಶಿಫ್ಗೆ ಬ್ರ್ಯಾಂಡ್ ಅಂಬಾಸಿಡಿರ್ ಆಗಿ ಆಯ್ಕೆಯಾದ ಶಾಂತಾಯಿ ವೃದ್ದಾಶ್ರಮದ ಸುಮನ್ ಅವರಿಗೆ ಪ್ರಮಾಣ ಪತ್ರ ನೀಡಲಾಯಿತು | Kannada Prabha
Image Credit: KP
ಕನ್ನಡಪ್ರಭ ವಾರ್ತೆ ಬೆಳಗಾವಿ ಕೇಂದ್ರ ಸರ್ಕಾರದ ಫಿಟ್ ಇಂಡಿಯಾ ಚಳವಳಿ ಅಡಿಯಲ್ಲಿ ವಿಶಾಖಪಟ್ಟಣದಲ್ಲಿ ನಡೆದ ಫಿಟ್ ಇಂಡಿಯಾ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ಗೆ ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದ ಸುಮನ್ ಅಜ್ಜಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಲಾಗಿದೆ ಎಂದು ವೃದ್ಧಾಶ್ರಮದ ಕಾರ್ಯಾಧ್ಯಕ್ಷ ವಿಜಯ ಮೋರೆ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಕೇಂದ್ರ ಸರ್ಕಾರದ ಫಿಟ್ ಇಂಡಿಯಾ ಚಳವಳಿ ಅಡಿಯಲ್ಲಿ ವಿಶಾಖಪಟ್ಟಣದಲ್ಲಿ ನಡೆದ ಫಿಟ್ ಇಂಡಿಯಾ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ಗೆ ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದ ಸುಮನ್ ಅಜ್ಜಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಲಾಗಿದೆ ಎಂದು ವೃದ್ಧಾಶ್ರಮದ ಕಾರ್ಯಾಧ್ಯಕ್ಷ ವಿಜಯ ಮೋರೆ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದಿಂದ ವಿಶಾಖಪಟ್ಟಣದಲ್ಲಿ ನಡೆದ ಸಮಾರಂಭದಲ್ಲಿ ಸುಮನ್ ಅಜ್ಜಿ ಅವರನ್ನು ಒಂದು ವರ್ಷದ ಅವಧಿಗೆ ಫಿಟ್ ಇಂಡಿಯಾ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ನ ಬ್ರಾಂಡ್ ಅಂಬಾಸಿಡರ್ ಆಗಿ ಘೋಷಿಸಲಾಗಿದೆ. ಇದು ಬೆಳಗಾವಿಗೆ ಹೆಮ್ಮೆಯ ಸಂಗತಿ ಎಂದರು.
ವಿಶಾಖಪಟ್ಟಣದಲ್ಲಿ ನಡೆದ 10 ಸಾವಿರ ಸೈಕ್ಲಿಂಗ್ ಕ್ರೀಡಾಕೂಟಕ್ಕೆ ಸುಮನ್ ಅಜ್ಜಿ ಚಾಲನೆ ನೀಡಿದ್ದು, ಹಿರಿಯ ನಾಗರಿಕರಲ್ಲಿಯೂ ಆರೋಗ್ಯಕರ ಜೀವನಶೈಲಿ ಸಾಧ್ಯ ಎಂಬ ಸಂದೇಶವನ್ನು ದೇಶಕ್ಕೆ ನೀಡಲಾಗಿದೆ ಎಂದು ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.