ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆ ಶೇ.77.20ರಷ್ಟು ಫಲಿತಾಂಶ ಪಡೆದು ರಾಜ್ಯಕ್ಕೆ 27ನೇ ಸ್ಥಾನ ಪಡೆದಿದ್ದರೇ, ಚಿಕ್ಕೋಡಿ ಶೇ.84.10ರಷ್ಟು ಫಲಿತಾಂಶದೊಂದಿಗೆ ರಾಜ್ಯಕ್ಕೆ 15ನೇ ಸ್ಥಾನ ಪಡೆದುಕೊಂಡಿದೆ.
ಕಳೆದ ವರ್ಷ 25ನೇ ಸ್ಥಾನ ಪಡೆದಿದ್ದ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಫಲಿತಾಂಶ ಈ ಬಾರಿ 27ನೇ ಸ್ಥಾನಕ್ಕೆ ಕುಸಿದಿದೆ. ಆದರೆ, ಒಟ್ಟಾರೆ ಮಕ್ಕಳ ತೇರ್ಗಡೆಯಲ್ಲಿ ಸುಧಾರಣೆ ಕಂಡು ಬಂದಿದ್ದು, ಕಳೆದ ವರ್ಷ ಶೇ.73.98ರಷ್ಟಿದ್ದರೆ, ಈ ಬಾರಿ ಶೇ.77.20ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ.ಕಳೆದ ವರ್ಷ 16ನೇ ಸ್ಥಾನದಲ್ಲಿದ್ದ ಚಿಕ್ಕೋಡಿ ಜಿಲ್ಲೆ ಈ ಬಾರಿ 15ನೇ ಸ್ಥಾನಕ್ಕೆ ಏರಿಕೆಯಾಗಿದೆ. ಕಳೆದ ಬಾರಿ ಶೇ.78.76ರಷ್ಟಿದ್ದ ಮಕ್ಕಳ ತೇರ್ಗಡೆ ರೇಟ್ ಈ ಬಾರಿ ಶೇ.84.76 ರಷ್ಟಾಗಿ ಏರಿಕೆ ಕಂಡಿದೆ.
ಬೆಳಗಾವಿ ಜಿಲ್ಲೆಯಲ್ಲಿ ಕಲಾ ವಿಭಾಗದಲ್ಲಿ ಒಟ್ಟು 7,433 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, 4,943 ಮಕ್ಕಳು ಮಾತ್ರ ಪಾಸಾಗಿದ್ದಾರೆ. 2,490 ಮಕ್ಕಳು ಅನುತ್ತೀರ್ಣರಾಗಿದ್ದಾರೆ. ಒಟ್ಟಾರೇ ಫಲಿತಾಂಶ ಶೇ.66.5ಕ್ಕೆ ಕುಸಿದಿದೆ. ವಾಣಿಜ್ಯ ವಿಭಾಗದಿಂದ 6,301 ಮಕ್ಕಳು ಪರೀಕ್ಷೆ ಬರೆದಿದ್ದು, 4,949 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 1,352 ಮಕ್ಕಳು ಅನುತ್ತೀರ್ಣಗೊಂಡಿದ್ದಾರೆ. ಒಟ್ಟಾರೆ ಶೇ.78.54 ಫಲಿತಾಂಶ ಬಂದಿದೆ.ವಿಜ್ಞಾನ ವಿಭಾಗದಲ್ಲಿ 7,061 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 6,161 ಜನ ಉತ್ತೀರ್ಣರಾಗಿದ್ದು, 900 ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ. ಒಟ್ಟಾರೇ ಶೇ. 87.25ರಷ್ಟು ಮಕ್ಕಳು ತೇರ್ಗಡೆಯಾಗಿದ್ದಾರೆ ಎಂದು ಬೆಳಗಾವಿ ಡಿಡಿಪಿಯು ಎಂ.ಎಂ.ಕಾಂಬಳೆ ತಿಳಿಸಿದ್ದಾರೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 30,228 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 24,795 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.82.03ರಷ್ಟು ಫಲಿತಾಂಶ ಬಂದಿದೆ.ಕಲಾ ವಿಭಾಗದಲ್ಲಿ 14,638 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 11,032 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 6,763 ವಿದ್ಯಾರ್ಥಿಗಳ ಪೈಕಿ 5,836 ವಿದ್ಯಾರ್ಥಿ ಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 8,827 ವಿದ್ಯಾರ್ಥಿಗಳಲ್ಲಿ 7,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ ನಗರ ಪ್ರದೇಶದ 15,546 ವಿದ್ಯಾರ್ಥಿಗಳಲ್ಲಿ 12,065 ಜನ ಉತ್ತೀರ್ಣರಾಗಿದ್ದರೇ, ಪರೀಕ್ಷೆ ಬರೆದ ಗ್ರಾಮೀಣ ಪ್ರದೇಶದ 14,682 ವಿದ್ಯಾರ್ಥಿಗಳಲ್ಲಿ 12,730 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಚಿಕ್ಕೋಡಿ ಡಿಡಿಪಿಯು ಪಾಂಡುರಂಗ ಭಂಡಾರೆ ತಿಳಿಸಿದ್ದಾರೆ.