ಬಳ್ಳಾರಿ ವಿವಿ ನಕಲಿ ಪ್ರಮಾಣ ಪ್ರಕರಣ; ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿ ಕ್ರಮದ ಶಿಫಾರಸು

| Published : Nov 12 2025, 02:15 AM IST

ಬಳ್ಳಾರಿ ವಿವಿ ನಕಲಿ ಪ್ರಮಾಣ ಪ್ರಕರಣ; ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿ ಕ್ರಮದ ಶಿಫಾರಸು
Share this Article
  • FB
  • TW
  • Linkdin
  • Email

ಸಾರಾಂಶ

ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ಮಂಗಳವಾರ ಜರುಗಿದ್ದು, ಘಟಿಕೋತ್ಸವದ ನಕಲಿ ಪ್ರಮಾಣಪತ್ರ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಕುರಿತು ನಿರ್ಧಾರಕ್ಕೆ ಬರಲಾಗಿದೆ.

ಬಳ್ಳಾರಿ: ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ಮಂಗಳವಾರ ಜರುಗಿದ್ದು, ಘಟಿಕೋತ್ಸವದ ನಕಲಿ ಪ್ರಮಾಣಪತ್ರ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಕುರಿತು ನಿರ್ಧಾರಕ್ಕೆ ಬರಲಾಗಿದೆ.

ರಾಜ್ಯದ ಗಮನ ಸೆಳೆದಿದ್ದ ಬಳ್ಳಾರಿ ವಿವಿಯ ಘಟಿಕೋತ್ಸವ ನಕಲಿ ಪ್ರಮಾಣಪತ್ರ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ನಿಯೋಜಿಸಲಾಗಿತ್ತು. ಈಚೆಗಷ್ಟೇ ಪ್ರಕರಣದ ತನಿಖಾ ವರದಿಯನ್ನು ತನಿಖಾಧಿಕಾರಿಯಾಗಿದ್ದ ಬೆಳಗಾವಿಯ ನಿವೃತ್ತ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಡಿ.ಎಸ್. ಶಿಂಧೆ ಅವರು ಈಚೆಗೆ ವಿವಿಗೆ ಸಲ್ಲಿಸಿದ್ದರು. ಮಂಗಳವಾರ ಜರುಗಿದ ಸಿಂಡಿಕೇಟ್ ಸಭೆಯಲ್ಲಿ ಘಟಿಕೋತ್ಸವದ ನಕಲಿ ಪ್ರಮಾಣಪತ್ರ ಕುರಿತು ಹೆಚ್ಚು ಚರ್ಚೆಯಾಯಿತು. ವಿಶ್ವವಿದ್ಯಾಲಯದ ಘನತೆಗೆ ಧಕ್ಕೆ ತಂದಿರುವ ಪ್ರಕರಣದ ರೂವಾರಿಗಳು ಹಾಗೂ ಇದಕ್ಕೆ ಬೆಂಬಲಿಸಿದವರವರ ವಿರುದ್ಧ ವಿಳಂಬ ಮಾಡದೆ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಮತ್ತೆ ನಡೆಯದಂತೆ ವಿವಿ ಎಚ್ಚರಿಕೆಯ ಹೆಜ್ಜೆ ಇಡಬೇಕು ಎಂದು ಸಿಂಡಿಕೇಟ್ ಸದಸ್ಯರು ಸಭೆಯಲ್ಲಿ ಒತ್ತಾಯಿಸಿದ್ದಾರೆ.

ಘಟಿಕೋತ್ಸವದ ನಕಲಿ ಪ್ರಮಾಣಪತ್ರ ಪ್ರಕರಣದಲ್ಲಿ ಈಗಾಗಲೇ ಗುರುತಿಸಲಾಗಿರುವ ಆರೋಪಿಗಳಲ್ಲದೆ, ವಿವಿಯ ನೌಕರರು ಸಹ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು ವಿವಿ ಮುಂದಿನ ನಡೆಯ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ. ಘಟಿಕೋತ್ಸವ ನಕಲಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ

ತನಿಖಾಧಿಕಾರಿಗಳಾದ ನಿವೃತ್ತ ನ್ಯಾಯಾಧೀಶರು ನೀಡಿರುವ ವರದಿ ಹಾಗೂ ಶಿಫಾರಸುಗಳನ್ನು ಚರ್ಚಿಸಿ, ಆಡಳಿತಾತ್ಮಕವಾದ ಸಮಿತಿಗೆ ಸಭೆ ವಹಿಸಿತು.

ವಿಶ್ವವಿದ್ಯಾಲಯದ ಕುಲಪತಿ ಹಾಗೂ ಕುಲಸಚಿವರು ಮುಂದಿನ ಕ್ರಮ ವಹಿಸಲಿದ್ದಾರೆ. ನಕಲಿ ಪ್ರಮಾಣಪತ್ರ ಪ್ರಕರಣ ಸೇರಿದಂತೆ ವಿವಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳ ಕುರಿತು ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆದಿದೆ. ಕುಲಪತಿ ಪ್ರೊ. ಎಂ. ಮುನಿರಾಜು, ಮೌಲ್ಯಮಾಪನ ಕುಲಸಚಿವರು ಸಭೆಯಲ್ಲಿ ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.