ಮಾ.1ರಂದು ಬೆಳ್ಮಣ್ ಬೊರ್ಡ್ ಹೈಸ್ಕೂಲ್ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮಾವೇಶವನ್ನು ‘ಚಾವಡಿ ಚರ್ಚೆ’ ಎಂಬ ವಿಶಿಷ್ಟ ಹಾಗೂ ಅರ್ಥಪೂರ್ಣ ಕಲ್ಪನೆಯಡಿ ಆಯೋಜಿಸಲಾಗುತ್ತಿದೆ ಎಂದು ಉದ್ಯಮಿ ಹಾಗೂ ಹಳೆ ವಿದ್ಯಾರ್ಥಿ ನಂದಳಿಕೆ ಸುಹಾಸ್ ಹೆಗ್ಡೆ ತಿಳಿಸಿದ್ದಾರೆ.

ಕಾರ್ಕಳ: ಮಾ.1ರಂದು ಬೆಳ್ಮಣ್ ಬೊರ್ಡ್ ಹೈಸ್ಕೂಲ್ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮಾವೇಶವನ್ನು ‘ಚಾವಡಿ ಚರ್ಚೆ’ ಎಂಬ ವಿಶಿಷ್ಟ ಹಾಗೂ ಅರ್ಥಪೂರ್ಣ ಕಲ್ಪನೆಯಡಿ ಆಯೋಜಿಸಲಾಗುತ್ತಿದೆ ಎಂದು ಉದ್ಯಮಿ ಹಾಗೂ ಹಳೆ ವಿದ್ಯಾರ್ಥಿ ನಂದಳಿಕೆ ಸುಹಾಸ್ ಹೆಗ್ಡೆ ತಿಳಿಸಿದ್ದಾರೆ.ಕಾರ್ಕಳದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಾಲೆಯ ಶೈಕ್ಷಣಿಕ ಪ್ರಗತಿ, ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಮತ್ತು ಭವಿಷ್ಯದ ಶಿಕ್ಷಣ ಯೋಜನೆಗಳಿಗೆ ಹಳೆ ವಿದ್ಯಾರ್ಥಿಗಳ ಅನುಭವ ಹಾಗೂ ಸಲಹೆಗಳನ್ನು ಬಳಸಿಕೊಳ್ಳುವ ಉದ್ದೇಶದಿಂದ ಈ ಸಮಾವೇಶವನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.ಹಳೆ ವಿದ್ಯಾರ್ಥಿಗಳು ತಮ್ಮ ಜೀವನಾನುಭವ, ಸಾಧನೆ ಮತ್ತು ಶಿಕ್ಷಣದ ಮಹತ್ವವನ್ನು ಹಂಚಿಕೊಳ್ಳುವ ಮೂಲಕ ಪ್ರಸ್ತುತ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಹಾಗೂ ಉತ್ತೇಜನ ನೀಡಲಿದ್ದಾರೆ. ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಶಿಸ್ತು ಬೆಳೆಸುವತ್ತ ಈ ಸಮಾವೇಶ ವಿಶೇಷ ಗಮನ ಹರಿಸಲಿದೆ. ಇದರೊಂದಿಗೆ ಪ್ರತಿಯೊಬ್ಬ ಹಳೆ ವಿದ್ಯಾರ್ಥಿಯು ಕನಿಷ್ಠ ಒಬ್ಬ ವಿದ್ಯಾರ್ಥಿಯನ್ನು ದತ್ತು ಪಡೆದು ಅವನ ಅಥವಾ ಅವಳ ಶೈಕ್ಷಣಿಕ, ಮಾನಸಿಕ ಮತ್ತು ವೈಯಕ್ತಿಕ ಬೆಳವಣಿಗೆಗೆ ಸಹಕಾರ ನೀಡುವ ಯೋಜನೆಯನ್ನೂ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ.ಈ ಸಮಾವೇಶದ ಬಗ್ಗೆ ಮಾತನಾಡಿದ ಶಿಕ್ಷಣ ತಜ್ಞ ಸರ್ವಜ್ಞ ತಂತ್ರಿ ಅವರು, ಹಳೆ ವಿದ್ಯಾರ್ಥಿಗಳ ಭಾಗವಹಿಸುವಿಕೆ ಶಿಕ್ಷಣ ಸಂಸ್ಥೆಗಳ ಬಲವರ್ಧನೆಗೆ ಅತ್ಯಂತ ಅಗತ್ಯ ಎಂದು ತಿಳಿಸಿದರು.

ಸರಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಲು ಇಂತಹ ಸಮಾವೇಶಗಳು ಮಾದರಿಯಾಗಬೇಕು ಎಂದು ಶಿಕ್ಷಣ ತಜ್ಞ ತುಕರಾಂ ಶೆಟ್ಟಿ ಹಾಗೂ ಅಲ್ವಿನ್ ನೇರಿ ಪಿಂಟೋ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ನ್ಯಾಯವಾದಿ ಬೆಳ್ಮಣ್ ಸರ್ವಜ್ಞ ತಂತ್ರಿ, ಶಿಕ್ಷಣ ತಜ್ಞ ತುಕಾರಾಮ್ ಶೆಟ್ಟಿ, ಅಲ್ವಿನ್ ನೇರಿ ಪಿಂಟೋ.ಉಪಸ್ಥಿತರಿದ್ದರು.