ಬೆಳ್ತಂಗಡಿ ಪಟ್ಟಣ ಪಂಚಾಯಿತಿ: ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ ಅವಿರೋಧ ಆಯ್ಕೆ

| Published : Aug 29 2024, 12:48 AM IST

ಬೆಳ್ತಂಗಡಿ ಪಟ್ಟಣ ಪಂಚಾಯಿತಿ: ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ ಅವಿರೋಧ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಮುಂದಿನ ಒಂದು ವರ್ಷ, ಮೂರು ತಿಂಗಳ ಅವಧಿಗೆ ಅಧ್ಯಕ್ಷರಾಗಿ ಜಯಾನಂದ ಗೌಡ ಹಾಗೂ ಉಪಾಧ್ಯಕ್ಷ ಗೌರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ: ಕಳೆದು ಸುಮಾರು ಒಂದು ವರ್ಷದಿಂದ ಅಧ್ಯಕ್ಷ ಉಪಾಧ್ಯಕ್ಷರಿಲ್ಲದ ಬೆಳ್ತಂಗಡಿ ಪಟ್ಟಣ ಪಂಚಾಯಿತಿಗೆ ಎರಡನೇ ಅವಧಿಗೆ ಶುಕ್ರವಾರ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾಗಿದೆ. ಮುಂದಿನ ಒಂದು ವರ್ಷ, ಮೂರು ತಿಂಗಳ ಅವಧಿಗೆ ಅಧ್ಯಕ್ಷರಾಗಿ ಜಯಾನಂದ ಗೌಡ ಹಾಗೂ ಉಪಾಧ್ಯಕ್ಷ ಗೌರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

11 ಸದಸ್ಯರ ಬೆಳ್ತಂಗಡಿ ಪಟ್ಟಣ ಪಂಚಾಯತಿನಲ್ಲಿ 7 ಮಂದಿ ಬಿಜೆಪಿ ಬೆಂಬಲಿತ ಹಾಗೂ 4 ಮಂದಿ ಕಾಂಗ್ರೆಸ್‌ ಬೆಂಬಲಿತ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿತ್ತು. ಬಿಜೆಪಿ ಬಹುಮತವನ್ನು ಹೊಂದಿದ್ದರಿಂದ ಎರಡೂ ಸ್ಥಾನಗಳಿಗೆ ಬಿಜೆಪಿ ಬೆಂಬಲಿತ ಸದಸ್ಯರು ತಲಾ ಒಂದು ನಾಮಪತ್ರ ಸಲ್ಲಿಸಿದ್ದರಿಂದ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿ ಬೆಂಬಲಿತ 7 ಮಂದಿ ಸದಸ್ಯರಲ್ಲಿ 6 ಮಂದಿ ಮಾತ್ರ ಉಪಸ್ಥಿತರಿದ್ದರೆ, 4 ಮಂದಿ ಕಾಂಗ್ರೆಸ್‌ ಬೆಂಬಲಿತ ಸದಸ್ಯರಲ್ಲಿ ಒಬ್ಬರೂ ಈ ಸಂದರ್ಭ ಹಾಜರಿರಲಿಲ್ಲ. ತಹಸೀಲ್ದಾರ್ ಪೃಥ್ವಿ ಸಾನಿಕಂ ಚುನಾವಣಾಧಿಕಾರಿಯಾಗಿದ್ದರು. ಬಳಿಕ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲಾಧ್ಯಕ್ಷ ಶ್ರೀನಿವಾಸ ಧರ್ಮಸ್ಥಳ, ಮಾಜಿ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಶಾಂತ ಪಾರೆಂಕಿ, ಈಶ್ವರ ಬೈರ, ಸದಾನಂದ ಪೂಜಾರಿ, ವಿಜಯಗೌಡ, ವಿಶ್ವನಾಥ ಹೊಳ್ಳ, ಗಿರೀಶ್ ಡೋಂಗ್ರೆ, ರಾಜೇಶ್ ಪ್ರಭು, ಪಂಚಾಯಿತಿ ಸಿಬ್ಬಂದಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.