ಬೆಳ್ತಂಗಡಿ: ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕನಿಗೆ ಸ್ವಾಗತ ಕಾರ್ಯಕ್ರಮ

| Published : Mar 10 2024, 01:46 AM IST

ಬೆಳ್ತಂಗಡಿ: ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕನಿಗೆ ಸ್ವಾಗತ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತೀಯ ಭೂ ಸೇನೆಯಲ್ಲಿ 30 ವರ್ಷ ಕರ್ತವ್ಯ ಸಲ್ಲಿಸಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಪ್ರವೀಣ್ ಶೆಣೈ ಅವರಿಗೆ ಸ್ವಾಗತ ಮತ್ತು ಸನ್ಮಾನ ಕಾರ್ಯಕ್ರಮ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಶನಿವಾರ ನಡೆಯಿತು

ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 30 ವರ್ಷ ಕರ್ತವ್ಯ ಸಲ್ಲಿಸಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಪ್ರವೀಣ್ ಶೆಣೈ ಅವರಿಗೆ ಸ್ವಾಗತ ಮತ್ತು ಸನ್ಮಾನ ಕಾರ್ಯಕ್ರಮ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಶನಿವಾರ ನಡೆಯಿತು.

ಶಾಸಕ ಹರೀಶ್ ಪೂಂಜ, ತಾಲೂಕಿನ ಜನತೆಯ ಪರವಾಗಿ ಗೌರವಿಸಿದರು. ಬಳಿಕ ಮಾತನಾಡಿ, ಮಿಲಿಟರಿಯಲ್ಲಿ ಸೇವೆ ಸಲ್ಲಿಸಿ ಬರುವಾಗ ಗೌರವಿಸುವ ಸಂಪ್ರದಾಯ ಬೆಳ್ತಂಗಡಿ ತಾಲೂಕಿನಲ್ಲಿದ್ದು, ಇದು ಮುಂದಿನ ಪೀಳಿಗೆಗೆ ಉತ್ತಮ ಸಂಪ್ರದಾಯವನ್ನು ತಿಳಿಸುವ ಕಾರ್ಯವಾಗಿದೆ. ತಾಲೂಕಿನ ಮಾಜಿ ಸೈನಿಕರು ಯುವಕರನ್ನು ಸೈನ್ಯಕ್ಕೆ ಸೇರುವ ತರಬೇತಿ ನೀಡುತ್ತಿರುವುದು ತಾಲೂಕಿಗೆ ಹೆಮ್ಮೆಯಾಗಿದೆ ಎಂದರು.ನಿವೃತ್ತ ಸೈನಿಕರ ಸಂಘದ ಗೌರವ ಅಧ್ಯಕ್ಷ, ನಿವೃತ್ತ ಮೇಜರ್ ಜನರಲ್ ಎಂ.ವಿ. ಭಟ್, ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷ ರಂಜನ್ ರಾವ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಉಪಸ್ಥಿತರಿದ್ದರು. ನಿವೃತ್ತ ಸೈನಿಕರ ಸಂಘ ಅಧ್ಯಕ್ಷ ಮಹಮ್ಮದ್ ರಫಿ, ಕಾರ್ಯದರ್ಶಿ ಉಮೇಶ್ ಬಂಗೇರ, ಮಂಜುಶ್ರೀ ಸೀನಿಯರ್ ಚೇಂಬರ್ ಪದಾಧಿಕಾರಿಗಳು, ಪ್ರವೀಣ್ ಶೆಣೈ ಅವರ ಕುಟುಂಬಸ್ಥರು, ಹಿತೈಷಿಗಳು ಹಾಜರಿದ್ದರು. ನಿವೃತ್ತ ಸೈನಿಕರ ಸಂಘದ ಮಾಜಿ ಅಧ್ಯಕ್ಷ ಸುನಿಲ್ ಶೆಣೈ ಸ್ವಾಗತಿಸಿದರು.ಕಾರ್ಯಕ್ರಮದ ಮೊದಲು ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದಿಂದ ಭವ್ಯ ಮೆರವಣಿಗೆ ನಡೆಯಿತು.