ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ನೇತೃತ್ವದಲ್ಲಿ ಪೊಲೀಸರ ತಂಡ ಅಕ್ರಮ ಡೀಸೆಲ್‌ ಸಂಗ್ರಹ ಅಡ್ಡೆ ಮೇಲೆ ದಾಳಿ ನಡೆಸಿದೆ.

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ನೇತೃತ್ವದಲ್ಲಿ ಪೊಲೀಸರ ತಂಡ ಅಕ್ರಮ ಡೀಸೆಲ್‌ ಸಂಗ್ರಹ ಅಡ್ಡೆ ಮೇಲೆ ದಾಳಿ ನಡೆಸಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ ಮತ್ತು ಸಿಬ್ಬಂದಿ ಪ್ರವೀಣ್ ಮುರುಗೋಳಿ ಚಾಲಕ ಪ್ರವೀಣ್ ಅವರು ಬೆಳ್ತಂಗಡಿ ಮುದೆಲ್ತಿಯಾರ್ ಎಂಬಲ್ಲಿ ಜಗದೀಶ್(35) ಎಂಬುವವರ ಮನೆಯ ಹಿಂಭಾಗದ ಶೆಡ್ ಮೇಲೆ ದಾಳಿ ನಡೆಸಿ ಬ್ಯಾರಲ್‌ ಗಳಲ್ಲಿ ಸಂಗ್ರಹಿಸಿದ್ದ 4,175 ಲೀಟರ್ ಡೀಸೆಲ್ ಹಾಗೂ 5 ಖಾಲಿ ಕ್ಯಾನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಒಟ್ಟು ಮೌಲ್ಯ 3 ಲಕ್ಷ 50 ಸಾವಿರ ರೂ. ಅಗಿರುತ್ತದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಜಗದೀಶ್ ಮತ್ತು ಹರೀಶ್ ಎಂಬವರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ಶ್ರೀ ರೋಹಿಣಿ ಸಿ.ಕೆ ನೇತೃತ್ವದಲ್ಲಿ ಉಪ್ಪಿನಂಗಡಿ ಫ್ರೋಬೆಷನರಿ ಐಪಿಎಸ್ ಅನ್ಯನ ಶ್ರೀವಾಸ್ಸವ್, ಉಪ್ಪಿನಂಗಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಾಗರಾಜ್, ಸಬ್ ಇನ್ಸ್‌ಪೆಕ್ಟರ್ ಸುತೇಶ್ ಕುಮಾರ್, ಡಿವೈಎಸ್ಪಿ ಕಚೇರಿಯ ಸಿಬ್ಬಂದಿ ಪ್ರವೀಣ್ ಮುರುಗೋಳಿ, ಲಾರೆನ್ಸ್.ಪಿ.ಆರ್, ಮನೋಹರ, ಚಾಲಕ ಪ್ರವೀಣ್, ಎಫ್ಎಸ್ಎಲ್ ವಿಭಾಗದ ಸೊಕೊ ತಂಡದ ಕಾವ್ಯಶ್ರೀ ಹಾಗೂ ಬೆಳ್ತಂಗಡಿ ಆಹಾರ ಇಲಾಖೆಯ ಆಹಾರ ನಿರೀಕ್ಷಕ ವಿಶ್ವ.ಕೆ, ಆಹಾರ ಶಿರಸ್ತೇದಾರ ಸಂತೋಷ್.ಜಿ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.