ಸಾರಾಂಶ
ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಬೆಳ್ತಂಗಡಿಯ ನ್ಯಾಯಾಲಯದಲ್ಲಿ 12ರಂದು ಬೆಳಗ್ಗೆ 10ರಿಂದ ರಾಷ್ಟ್ರೀಯ ಲೋಕ ಅದಾಲತ್ ತಾಲೂಕು ನಡೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಸಿ ಮನು ಬಿ.ಕೆ. ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ರಾಜಕಾರದ ನಿರ್ದೇಶನದಂತೆ ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಬೆಳ್ತಂಗಡಿಯ ನ್ಯಾಯಾಲಯದಲ್ಲಿ 12ರಂದು ಬೆಳಗ್ಗೆ 10ರಿಂದ ರಾಷ್ಟ್ರೀಯ ಲೋಕ ಅದಾಲತ್ ತಾಲೂಕು ನಡೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಸಿ ಮನು ಬಿ.ಕೆ. ತಿಳಿಸಿದ್ದಾರೆ.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ. ಹೆಚ್ಚಿನ ಪ್ರಕರಣಗಳು ಇತ್ಯರ್ಥಗೊಳ್ಳಲು ಎರಡು ಕಡೆಯ ಕಕ್ಷಿದಾರರ ಸಹಕಾರದ ಅಗತ್ಯವಿದೆ. ವಕೀಲರು, ಇನ್ಸೂರೆನ್ಸ್ ಕಂಪನಿಗಳ ಅಧಿಕಾರಗಳೊಂದಿಗೆ ಸಭೆ ನಡೆಸಿ ಕಕ್ಷಿದಾರರಿಗೆ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಮನವೊಲಿಸುವಂತೆ ಕೋರಿ ಕೊಳ್ಳಲಾಗಿದೆ ಎಂದರು.ಈ ರೀತಿ ರಾಜಿ ಸಂಧಾನದ ಮೂಲಕ ಪ್ರಕರಣಗಳು ಇತ್ಯರ್ಥವಾಗುವುದರಿಂದ ಹಣ, ಸಮಯ ಉಳಿತಾಯ, ಮಾನಸಿಕ ನೆಮ್ಮದಿ ಮತ್ತು ತ್ವರಿತ ನ್ಯಾಯದಾನ ದೊರಕುತ್ತದೆ ಎಂದು ಹೇಳಿದರು.
ಬೆಳ್ತಂಗಡಿಯಲ್ಲಿರುವ ಮೂರು ನ್ಯಾಯಾಲಯಗಳಲ್ಲಿ 4,000ಕ್ಕಿಂತ ಅಧಿಕ ಪ್ರಕರಣಗಳಿದ್ದು ವರ್ಷದಲ್ಲಿ ಮೂರರಿಂದ ನಾಲ್ಕು ಬಾರಿ ಲೋಕ ಅದಾಲತ್ ನಡೆಸಿ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗುತ್ತದೆ ಎಂದು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಎಚ್., ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಕಾರ್ಯದರ್ಶಿ ನವೀನ್ ಬಿ.ಕೆ. ಉಪಸ್ಥಿತರಿದ್ದರು