ಬೆಳ್ತಂಗಡಿ: ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಪ್ರತಿ ತಿಂಗಳು ಆಚರಿಸುವ ಸಿರಿ ಸಿಬ್ಬಂ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮ ಇತ್ತೀಚೆಗ ಜರುಗಿತು.ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿ, ಹೆಗ್ಗಡೆ ಹಾಗೂ ಹೇಮಾವತಿ ಅಮ್ಮನವರು ಮಹಿಳಾ ಸಬಲೀಕರಣದ ಧ್ಯೇಯೋದ್ದೇಶದಿಂದ ಪ್ರಾರಂಭಿಸಿರುವ ಸಿರಿ ಸಂಸ್ಥೆಯಲ್ಲಿ ಎಲ್ಲ ಸಿರಿ ಸಿಬ್ಬಂದಿ ಅತ್ಯಂತ ಶ್ರದ್ಧೆ, ಪ್ರಾಮಾಣಿಕತೆಯಿಂದ ದುಡಿಯುವ ಮೂಲಕ ಸಿರಿ ಬ್ರ‍್ಯಾಂಡನ್ನು ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿಯುವ ಮೂಲಕ ಹೆಗ್ಗಡೆ ಕನಸು ನನಸಾಗಿಸಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ ಅವರು ಎ,ವಿ, ಶೆಟ್ಟಿ ಮತ್ತು ಅವರ ಪತ್ನಿ ಅರುಣ ವಿ ಶೆಟ್ಟಿ ಅವರನ್ನು ಸ್ವಾಗತಿಸಿದರು. ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ ಸಿರಿ ಸಿಬ್ಬಂದಿಗೆ ಶುಭಕೋರಿದರು. ಸಿರಿ ಕ್ಲಬ್ ಅಧ್ಯಕ್ಷೆ ಉಷಾ, ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಿರಿ ಸಿಬ್ಬಂದಿ ಭಾಗವಹಿಸಿದ್ದರು. ಸಿರಿ ಸಂಸ್ಥೆಯ ಜೀವನ್ ಕುಮಾರ್ ನಿರೂಪಿಸಿದರು. ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ ವಂದಿಸಿದರು.
ಎ.ವಿ. ಶೆಟ್ಟಿ ದಂಪತಿಗೆ ಸಿರಿ ಸಂಸ್ಥೆ ಗೌರವಾರ್ಪಣೆ
ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಪ್ರತಿ ತಿಂಗಳು ಆಚರಿಸುವ ಸಿರಿ ಸಿಬ್ಬಂ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮ ಇತ್ತೀಚೆಗ ಜರುಗಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.